Friday, June 26, 2026
Homeತಾಜಾ ಸುದ್ದಿರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್

ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ಗೋಕಾಕ್ ಟಿಹೆಚ್‌ಒ ಡಾ. ಮುತ್ತಣ್ಣ ಕೊಪ್ಪದ್ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಏಪ್ರಿಲ್ 1ರಂದು ಗೋಕಾಕ್ ಆಸ್ಪತ್ರೆಗೆ ಬಂದಿದ್ದರು. ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಅಂದು ಅವರಿಗೆ ಉಸಿರಾಟದ ತೊಂದರೆ, ಶುಗರ್ ಹಾಗೂ ಬಿಪಿ ಕೂಡ ಅಧಿಕವಾಗಿತ್ತು. ಸದ್ಯ ಅವರು ಹೋಂ ಐಸೋಲೇಷನ್ ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಗೋಕಾಕ್ ಆಸ್ಪತ್ರೆ ವೈದ್ಯ ಡಾ. ರವೀಂದ್ರ ನೀಡಿರುವ ಮಾಹಿತಿ ಪ್ರಕಾರ ರಮೇಶ್ ಜಾರಕಿಹೊಳಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಕಾರು ಚಾಲಕ ಹಾಗೂ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿತ್ತು. ಅವರಿಂದಲೇ ರಮೇಶ್ ಅವರಿಗೂ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಂದ್ಹಾಗೆ ರಮೇಶ್ ಜಾರಕಿಹೊಳಿ ಅವರು ಇಂದು ಎಸ್ ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು.ಆದರೆ ಕೊರೊನಾ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗಿಲ್ಲ.

.

- Advertisement -

Latest News

error: Content is protected !!