- Advertisement -
![]()
- Advertisement -
ಮಂಗಳೂರು: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಬೈಕ್, ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ರಮೇಶ್ ರೈ ಅವರು ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ,ಗೆದ್ದಿದ್ದರು. ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಬಿದ್ದಿದ್ದನ್ನು ನೋಡಿದ ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದಾರೆ.
ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ ನಂಬರ್ ಪಡೆದು ಪೋನ್ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಗೊತ್ತಾಗಿದ್ದು ಅವರ ಮನೆಯವರಿಗೆ ಮಾಹಿತಿ ನೀಡಿದ್ದಾರೆ.
- Advertisement -


