Friday, May 3, 2024
Homeತಾಜಾ ಸುದ್ದಿಬೆಂಗಳೂರಿನ ರಾಮೇಶ್ವರ ಕೆಫೆಯ ಸ್ಫೋಟದ ಶಂಕಿತ ಉಗ್ರ ಬಳ್ಳಾರಿಯಲ್ಲಿ ಸೆರೆ

ಬೆಂಗಳೂರಿನ ರಾಮೇಶ್ವರ ಕೆಫೆಯ ಸ್ಫೋಟದ ಶಂಕಿತ ಉಗ್ರ ಬಳ್ಳಾರಿಯಲ್ಲಿ ಸೆರೆ

spot_img
- Advertisement -
- Advertisement -

ಬೆಂಗಳೂರಿನ ರಾಮೇಶ್ವರ ಕೆಫೆಯ ಸ್ಫೋಟದ ಶಂಕಿತ ಉಗ್ರನನ್ನು ಬಳ್ಳಾರಿಯಲ್ಲಿ ಬಂಧಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಶಂಕಿತ ಆರೋಪಿಯನ್ನು ಅರೆಸ್ಟ್ ಮಾಡಿದೆ.  ಶಬ್ಬೀರ್ ಬಂಧಿತ ಶಂಕಿತ ಉಗ್ರ.

 ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಶಬ್ಬೀರ್ ನನ್ನು ವಶಕ್ಕೆ ಪಡೆಯಲಾಗಿದ್ದು ಈತ ಬಳ್ಳಾರಿಯ ಟ್ಯಾಂಕ್ ಬಂಡ್ ರೋಡ್ ಗಲ್ಲಿ ನಿವಾಸಿಯಾಗಿದ್ದಾನೆ. ತೋರಣಗಲ್ ನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನಡೆಸಿದವನಿಗೆ ಕರೆ ಮಾಡಿರುವ ಶಂಕೆಯಿದೆ.

ಎನ್​ಐಎ ವಶಕ್ಕೆ ಪಡೆದ ಶಬ್ಬೀರ್, ತೋರಣಗಲ್​ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮಾರ್ಚ್​. 01ನೇ ತಾರೀಖು 9 ಗಂಟೆ 10 ನಿಮಿಷಕ್ಕೆ ಬುಡಾ ಕಾಂಪ್ಲೆಕ್ಸ್​​ ಬಳಿ ಶಂಕಿತ ಉಗ್ರನನ್ನ ಭೇಟಿಯಾಗಿದ್ದ. ಹಾಗೂ ಶಬ್ಬೀರ್, ಶಂಕಿತನನ್ನು ಫೋನ್ ಮೂಲಕ ಸಂಪರ್ಕ ಮಾಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಎಲ್ಲಾ ಅನುಮಾನದ ಮೇಲೆ ಎನ್‌ಐಎ ಅಧಿಕಾರಿಗಳು ಶಬ್ಬೀರ್​ನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

- Advertisement -
spot_img

Latest News

error: Content is protected !!