- Advertisement -
![]()
- Advertisement -
ಬಂಟ್ವಾಳ: ಪುದು ಗ್ರಾ.ಪಂ.ಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸೆ.25ರಂದು , ಗ್ರಾ.ಪಂ.ಕಚೇರಿಯಲ್ಲಿ ಚುನಾವಣೆ ನಡೆಯಿತು.
ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾತಿ ನಿಗದಿಯಾಗಿದ್ದು ಅಧ್ಯಕ್ಷರಾಗಿ ರಮ್ಲಾನ್ ಮಾರಿಪಳ್ಳ ಹಾಗೂ ಉಪಾಧ್ಯಕ್ಷೆಯಾಗಿ ರುಕ್ಸಾನಾ ಅಮ್ಮೆಮಾರ್ ಅವರು ಆಯ್ಕೆಯಾದರು.
ಆಯ್ಕೆ ಪ್ರಕ್ರಿಯೆಯನ್ನ ಚುನಾವಣಾ ಅಧಿಕಾರಿ ಬಂಟ್ವಾಳ ತಹಶಿಲ್ದಾರ್ ಮಂಜುನಾಥ್ ಅವರು ನಡೆಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷೆ ರಶೀದಾ ಬಾನು, ಉಪಾಧ್ಯಕ್ಷ ಇಕ್ಬಾಲ್ ಸುಜೀರು, ಪುದು ವಲಯ ಕಾಂಗ್ರೆಸ್ ಅಧ್ಯಕ್ಷ ಅಹಮದ್ ದಿರ್ಶಾದ್,ಮುಖಂಡರುಗಳಾದ ಮಹಮ್ಮದ್ ಬುಖಾರಿ ಕುಂಪಣಮಜಲು, ಎಂ.ಕೆ.ಮಹಮ್ಮದ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
- Advertisement -


