Thursday, June 4, 2026
Homeತಾಜಾ ಸುದ್ದಿಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಗೆ ಬಲಿ

ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಗೆ ಬಲಿ

- Advertisement -
- Advertisement -

ಬೆಂಗಳೂರು : ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಬಲಿಯಾಗಿದ್ದಾರೆ.

ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಚಿಕಿತ್ಸೆ ಪಡೆದು ಕೊಂಚ ಚೇತರಿಸಿಕೊಂಡಿದ್ದರು. ಆ ಬಳಿಕ ಅವರಿಗೆ ಕೋವಿಡ್ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ ಅವರ ಆರೋಗ್ಯ ಕಳೆದ ಕೆಲವು ದಿನಗಳಿಂದ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರಾಮು ಕಣಗಾಲ್ ಇಂದು ನಿಧನರಾಗಿದ್ದಾರೆ.

ರಾಮು ಕಣಗಾಲ್ ತಮ್ಮ ವಿದ್ಯಾಭ್ಯಾಸವನ್ನು ಚೆನ್ನೈ ಮುಗಿಸಿ, ನಂತರ ಬೆಂಗಳೂರಿನಲ್ಲಿ ಕಣಗಾಲ್ ನೃತ್ಯಾಲಯ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು.

- Advertisement -

Latest News

error: Content is protected !!