- Advertisement -
- Advertisement -
ಮಂಗಳೂರು: ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ನಾಳೆಯಿಂದಲೇ ಪವಿತ್ರ ರಂಜಾನ್ ಉಪವಾಸ ಆಚರಣೆ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಜಿ ನಾಳೆಯಿಂದ ರಂಜಾನ್ ಮಾಸ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.
ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ನಾಳೆಯಿಂದಲೇ ರಂಜಾನ್ ಉಪವಾಸ ವ್ರತಾಚರಣೆ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಜಿ ತ್ವಾಹ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.
ಒಂದು ತಿಂಗಳ ಉಪವಾಸ ವ್ರತಾಚರಣೆ ಬಳಿಕ ಮೇ 25 ರಂದು ರಂಜಾನ್ ಆಚರಣೆ ಇರುತ್ತದೆ. ಲಾಕ್ ಡೌನ್ ಇರುವುದರಿಂದ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕಿದೆ. ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ ಎಂದು ಹೇಳಲಾಗಿದೆ.
- Advertisement -