Saturday, August 29, 2026
Homeಕರಾವಳಿಸುರತ್ಕಲ್: ಸಂಗೀತ ನಿರ್ದೇಶಕ ಗುರುಕಿರಣ್‌ಗೆ 2021ರ ಸಾಲಿನ 'ರಂಗಚಾವಡಿ' ಪ್ರಶಸ್ತಿ

ಸುರತ್ಕಲ್: ಸಂಗೀತ ನಿರ್ದೇಶಕ ಗುರುಕಿರಣ್‌ಗೆ 2021ರ ಸಾಲಿನ ‘ರಂಗಚಾವಡಿ’ ಪ್ರಶಸ್ತಿ

- Advertisement -
- Advertisement -

ಸುರತ್ಕಲ್: ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಡಿ.25ರಂದು ಸಂಜೆ 4 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಈ ವೇಳೆ ಸಂಗೀತ ನಿರ್ದೇಶಕ ಗುರುಕಿರಣ್‌ಗೆ 2021ರ ಸಾಲಿನ ‘ರಂಗಚಾವಡಿ’ ಪ್ರಶಸ್ತಿ ಪ್ರದಾನ ಹಾಗೂ ಇತ್ತೀಚೆಗೆ ನಿಧನರಾದ ನಟ ಪುನೀತ್‌ ರಾಜಕುಮಾರ್ ಗೆ ಗೀತ ನಮನ ಕಾರ್ಯಕ್ರಮ ಗಿರೀಶ್ ಸಾಗರ ಮತ್ತು ಬಳಗದವರಿಂದ ನಡೆಯಲಿದೆ. ಎಂಆರ್‌ಜಿ ಗ್ರೂಪ್‌ನ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಅತಿಥಿಗಳಾಗಿ ಶಾಸಕ ಡಾ.ವೈ.ಭರತ್ ಶೆಟ್ಟಿ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಾಗತಿಕ ಬಂಟ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಡಾ. ಸಂಜೀವ ದಂಡೆಕೇರಿ, ಉದ್ಯಮಿ ಯಾದವ ಕೋಟ್ಯಾನ್ ಪೆರ್ಮುದೆ, ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ ಎಲ್. ಶೆಟ್ಟಿ, ದ.ಕ. ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಉದ್ಯಮಿ ರಮಾನಾಥ್ ಶೆಟ್ಟಿ ಬೈಕಂಪಾಡಿ, ಲಕುಮಿ ರಂಗ ತಂಡದ ಸಂಚಾಲಕ ಕಿಶೋರ್ ಡಿ. ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜಾ, ಕ್ಯಾಟ್ಕದ ಅಧ್ಯಕ್ಷ ಮೋಹನ್ ಕೊಪ್ಪಲ, ಹಿರಿಯ ರಂಗಕರ್ಮಿ ವಿ.ಜಿ ಪಾಲ್ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ರೂಪೇಶ್ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ನಿರೀಕ್ಷಾ ಶೆಟ್ಟಿ, ಶಿಫಾಲಿ ಮಂಗಳೂರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

- Advertisement -

Latest News

error: Content is protected !!