- Advertisement -
![]()
- Advertisement -
ಉಪ್ಪಿನಂಗಡಿ; ಮನೆಗೆ ನುಗ್ಗಿ ಬಾಲಕಿಯೊಬ್ಬಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಕಡಬ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಬಂಧಿತ ಆರೋಪಿಗಳು.
ಆರೋಪಿಗಳು ಕರಾಯದಲ್ಲಿ ಮರ ಕೆಲಸ ಮಾಡುತ್ತಿದ್ದರು.ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿದ್ದರು. ಮನೆಯಲ್ಲಿನ ಸ್ಥಿತಿಗತಿ ಗಮನಸಿದ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ ಈ ನಂಬರಿಗೆ ಫೋನ್ ಮಾಡು ಎಂದು ಬೆದರಿಕೆ ಹಾಕಿ ಹೋಗಿದ್ದ ಎನ್ನಲಾಗಿದೆ.
ಮರು ದಿನ ರಾತ್ರಿ 8 ಗಂಟೆಯ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಅಬ್ಬಾಸ್ ಎಂಬಾತನೊಂದಿಗೆ ಬಂದ ಆರೋಪಿಯು ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.ಬಳಿಕ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎನ್ನಲಾಗಿದೆಯ
- Advertisement -


