Sunday, June 7, 2026
Homeಕರಾವಳಿಬೆಳ್ತಂಗಡಿ: 4ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ !

ಬೆಳ್ತಂಗಡಿ: 4ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ !

- Advertisement -
- Advertisement -

ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ಯುವಕನೋರ್ವ ನಾಲ್ಕನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

ಆರೋಪಿ ಜಯಾನಂದ ಪುಟ್ಟ ಬಾಲಕಿಯನ್ನು ನಿರ್ಮಾಣಹಂತದಲ್ಲಿರುವ ಮನೆಗೆ ಕರೆದೊಯ್ದು ಬೆದರಿಸಿ ಅತ್ಯಾಚಾರವೆಸಗಿದ್ದು ಬಾಲಕಿಗೆ ಕೊಲೆ ಬೆದರಿಕೆ ಹಾಕಿದ್ದಾನೆ.

ಈ ವಿಷಯವನ್ನು ಬಾಲಕಿ ಮನೆಯವರಿಗೆ ತಿಳಿಸಿದ್ದು ಕೂಡಲೇ ಪೋಷಕರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಹಾಗೇ ಆರೋಪಿ ಜಯಾನಂದ ಎಂಬಾತನನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಈತನ ಮೇಲೆ ಹಿಂದೆಯೂ ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!