Thursday, May 2, 2024
Homeತಾಜಾ ಸುದ್ದಿಸೋನಿಯಾ ಗಾಂಧಿ ಖಾಸಗಿ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ: 71 ವರ್ಷದ ಪಿಪಿ ಮಾಧವನ್ ವಿರುದ್ಧ...

ಸೋನಿಯಾ ಗಾಂಧಿ ಖಾಸಗಿ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ: 71 ವರ್ಷದ ಪಿಪಿ ಮಾಧವನ್ ವಿರುದ್ಧ ದಿಲ್ಲಿಯಲ್ಲಿ ದೂರು ದಾಖಲು

spot_img
- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಖಾಸಗಿ ಕಾರ್ಯದರ್ಶಿ ಪಿಪಿ ಮಾಧವನ್ ಅವರ ವಿರುದ್ಧ ದಿಲ್ಲಿ ಪೊಲೀಸರು ಅತ್ಯಾಚಾರ ಮತ್ತು ಬೆದರಿಕೆ ಅಪರಾಧ ಪ್ರಕರಣ ದಾಖಲು ಮಾಡಿದ್ದಾರೆ. 26 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಮಾಧವನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲಸ ಕೊಡಿಸುವ ಭರವಸೆ ಹಾಗೂ ಮದುವೆಯಾಗುವುದಾಗಿ ಭರವಸೆ ನೀಡುವ ಮೂಲಕ ಆರೋಪಿ ತನಗೆ ಆಮಿಷ ಒಡ್ಡಿದ್ದರು ಎಂದು ಮಹಿಳೆ ಆರೋಪ ಮಾಡಿರುವುದಾಗಿ ಹೇಳಿದ್ದಾರೆ. ಈ ವಿಚಾರದ ಬಗ್ಗೆ ಎಲ್ಲಿಯಾದರೂ ಬಾಯಿಬಿಟ್ಟರೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಮಾಧವನ್ ತಮಗೆ ಬೆದರಿಕೆ ಹಾಕಿರುವುದಾಗಿ ಮಹಿಳೆ ದೂರು ನೀಡಿದ್ದಾರೆ.

ಉತ್ತಮ ನಗರ ಪೊಲೀಸ್ ಠಾಣೆಯಲ್ಲಿ ಜೂನ್ 25ರಂದು ದೂರು ಸ್ವೀಕರಿಸಲಾಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು ಸೆಕ್ಷನ್ 506 (ಅಪರಾಧ ಬೆದರಿಕೆ) ಪ್ರಕರಣ ದಾಖಲು ಮಾಡಲಾಗಿದೆ. ನಾವು ಪ್ರಕರಣದ ವಿಚಾರಣೆ ನಡೆಸುತ್ತಿದ್ದೇವೆ” ಎಂದು ದ್ವಾರಕಾ ಉಪ ಪೊಲೀಸ್ ಆಯುಕ್ತ ಎಂ ಹರ್ಷ ವರ್ಧನ್ ತಿಳಿಸಿದ್ದಾರೆ.

ಹಿರಿಯ ರಾಜಕೀಯ ನಾಯಕಿಯ ಖಾಸಗಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ 71 ವರ್ಷದ ವ್ಯಕ್ತಿ ವಿರುದ್ಧ ಮಾಡಿರುವ ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ನಾಯಕರ ಹೆಸರನ್ನು ಡಿಸಿಪಿ ಬಹಿರಂಗಪಡಿಸಿಲ್ಲ. ಆದರೆ ಮಾಧವನ್ ವಿರುದ್ಧ ಆರೋಪ ದಾಖಲಿಸಲಾಗಿದೆ ಎಂದು ದಿಲ್ಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯು ದಿಲ್ಲಿಯಲ್ಲಿ ವಾಸಿಸುತ್ತಿದ್ದು, ಆಕೆಯ ಪತಿ 2020ರಲ್ಲಿ ಮೃತಪಟ್ಟಿದ್ದರು. ಆಕೆಯ ಪತಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಖ್ಯವಾಗಿ ಹೋರ್ಡಿಂಗ್‌ಗಳನ್ನು ಅಳವಡಿಸುವ ಕೆಲಸಕ್ಕೆ ನಿಯೋಜಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2020ರ ಫೆಬ್ರವರಿಯಲ್ಲಿ ನನ್ನ ಪತಿ ಮೃತಪಟ್ಟ ಬಳಿಕ, ನಾನು ಕೆಲಸಕ್ಕಾಗಿ ಹುಡುಕಾಡಲು ಆರಂಭಿಸಿದ್ದೆ. ಮಾಧವನ್ ಅವರ ಜತೆ ಸಂಪರ್ಕದಲ್ಲಿದ್ದೆ. ಅವರು ಮೊದಲು ನನ್ನನ್ನು ಸಂದರ್ಶನಕ್ಕೆ ಕರೆಸಿಕೊಂಡಿದ್ದರು. ಅವರು ನನಗೆ ವಾಟ್ಸಾಪ್‌ನಲ್ಲಿ ವಿಡಿಯೋ ಕಾಲ್ ಮತ್ತು ಚಾಟ್‌ಗಳನ್ನು ಮಾಡುತ್ತಿದ್ದರು. ಅವರು ಉತ್ತಮ ನಗರ ಮೆಟ್ರೋ ಸ್ಟೇಷನ್ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದರು. ಕಾರಿನ ಒಳಗೇ ನನ್ನ ಮೇಲೆ ಬಲಾತ್ಕಾರ ಮಾಡಿದ್ದರು. 2022ರ ಫೆಬ್ರವರಿಯಲ್ಲಿ ಸುಂದರ್ ನಗರದಲ್ಲಿರುವ ಫ್ಲಾಟ್ ಒಂದಕ್ಕೆ ಕರೆದೊಯ್ದು, ಅಲ್ಲಿ ಕೂಡ ನನ್ನ ಸಮ್ಮತಿ ಇಲ್ಲದೆ ಬಲಾತ್ಕಾರ ನಡೆಸಿದ್ದರು” ಎಂದು ಮಹಿಳೆ ಆರೋಪಿಸಿದ್ದಾರೆ.

ಇನ್ನು ರಾಜಕೀಯ ದ್ವೇಷದಿಂದ ತಮ್ಮ ಹೆಸರಿಗೆ ಕಳಂಕ ಉಂಟುಮಾಡುವ ಉದ್ದೇಶದಿಂದ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಮಾಧವನ್ ಪ್ರತಿಕ್ರಿಯೆ ನೀಡಿದ್ದಾರೆ. ಜೂನ್ 25ರಂದು ಉತ್ತಮ ನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮುಂದೆ ತಾವು ಹಾಜರಾಗಿದ್ದು, ಅಲ್ಲಿ ವಿವರಣೆ ನೀಡಿದ್ದಾಗಿ ಮತ್ತು ಬಳಿಕ ಅಲ್ಲಿಂದ ಹೊರಡುವಂತೆ ಸೂಚಿಸಿದ್ದರು ಎಂದು ಮಾಧವನ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!