Saturday, June 13, 2026
Homeಅಪರಾಧಖ್ಯಾತ ನಟ, ನಿರ್ಮಾಪಕ ವಿಜಯ್ ಬಾಬು ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಖ್ಯಾತ ನಟ, ನಿರ್ಮಾಪಕ ವಿಜಯ್ ಬಾಬು ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

- Advertisement -
- Advertisement -

ಕೇರಳ: ಮಲಯಾಳಂನ ಮತ್ತೋರ್ವ ಖ್ಯಾತ ನಟನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟ ಮತ್ತು ನಿರ್ಮಾಪಕ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಏಪ್ರಿಲ್ 22 ರಂದು ಯುವತಿ ನೀಡಿರುವ ದೂರಿನ ಮೇರೆಗೆ ಎರ್ನಾಕುಲಂ ಸೌತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ ಕೊಚ್ಚಿಯ ಎರ್ನಾಕುಲಂ ಫ್ಲಾಟ್‌ನಲ್ಲಿ ವಿಜಯ್ ಬಾಬು ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.


 ಆದರೆ ಈ ಕುರಿತು ಫೇಸ್‌ಬುಕ್ ಲೈವ್‌ನಲ್ಲಿ ಪ್ರತಿಕ್ರಿಯಿಸಿದ ನಟ, ಈ ಆರೋಪ ಸುಳ್ಳು ದೂರು ನೀಡಿರುವ ಸಂತ್ರಸ್ತೆಯ ನಿಜವಾದ ಆರೋಪಿ. ಆಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.

- Advertisement -

Latest News

error: Content is protected !!