Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ:  ಯುವಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ; ಗರ್ಭಿಣಿಯಾದ ಬಾಲಕಿ

ಬೆಳ್ತಂಗಡಿ:  ಯುವಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ; ಗರ್ಭಿಣಿಯಾದ ಬಾಲಕಿ

- Advertisement -
- Advertisement -

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗಭ೯ವತಿಯಾಗಿದ್ದು,ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ಆರೋಪಿ ವಿರುದ್ಧ ದೂರು ನೀಡಿದ್ದು ಅದರಂತೆ ಆರೋಪಿ ಶಿರ್ಲಾಲು ಗ್ರಾಮದ ಸನತ್ (28) ಎಂಬ ಯುವಕನನ್ನು ವೇಣೂರು ಪೊಲೀಸರು ಮೇ.7 ರಂದು ಬಂಧಿಸಿದ್ದಾರೆ.

ಆರೋಪಿ ಸನತ್ ಬಾಲಕಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಅಗಾಗ ಮನೆಗೆ ಬಂದವನು ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. 2024 ಮೇ 22ರಂದು ಬಾಲಕಿಯ ಜನ್ಮ ದಿನದ ಕಾರ್ಯಕ್ರಮಕ್ಕೆ ಬಂದು ಆರೋಪಿ ರಾತ್ರಿ ಉಳಿದುಕೊಂಡಿದ್ದು, ರಾತ್ರಿ ಮಲಗಿದ ಕೋಣೆಗೆ ಹೋಗಿ ಬಲತ್ಕಾರದಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಳಿಕ ಕೂಡಾ ಅಗಾಗ ರಾತ್ರಿ ಸಮಯದಲ್ಲಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿ ಸನತ್ ‌ವಿರುದ್ದ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಲಾಗಿದ್ದು ,ವೇಣೂರು ಪೊಲೀಸ್ ಠಾಣೆಯಲ್ಲಿ 64 BNS-2023 ಮತ್ತು : 4,6 ಪೋಕ್ಸೋ ಕಾಯಿದೆ- 2012ರಂತೆ ಮೇ.6 ರಂದು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!