Friday, June 5, 2026
Homeಕರಾವಳಿಉಡುಪಿಕುಂದಾಪುರ: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ

ಕುಂದಾಪುರ: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಕುಂದಾಪುರ: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಸಂಬಂಧ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯ 49 ವರ್ಷದ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ..

ಗಣೇಶ್ ನಾಯಕ್​ಗೆ ಶಿಕ್ಷೆಗೊಳಗಾದ ವ್ಯಕ್ತಿ. ಜೀವಾವಧಿ ಶಿಕ್ಷೆಯ ಜೊತೆಗೆ 10 ಸಾವಿರ ರೂ ದಂಡವನ್ನೂ ವಿಧಿಸಲಾಗಿದೆ. ದಂಡ ಪಾವತಿಸದಿದ್ರೆ ಹೆಚ್ಚವರಿ ಜೈಲುಶಿಕ್ಷೆ ಅನುಭವಿಸುವಂತೆ ಕೋರ್ಟ್‌ ಆದೇಶಿಸಿದೆ.

2021ರ ಅಕ್ಟೋಬರ್ ತಿಂಗಳಲ್ಲಿ ಪತ್ನಿ ಮನೆಯಲ್ಲಿಲ್ಲದಾಗ ಮಲಮಗಳಿಗೆ ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ಪತ್ನಿ ಊರಿಗೆ ವಾಪಾಸಾದಾಗ ಮಗಳು ಗರ್ಭಿಣಿಯಾಗಿರುವ ವಿಚಾರ ತಿಳಿದಿದೆ. ನಂತರ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

- Advertisement -

Latest News

error: Content is protected !!