Sunday, May 5, 2024
Homeಕರಾವಳಿಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಬೆದರಿಕೆ: ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಗರ್ಭಪಾತ: ಪೋಕ್ಸೋ ಸೇರಿದಂತೆ ವಿವಿಧ...

ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಬೆದರಿಕೆ: ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಗರ್ಭಪಾತ: ಪೋಕ್ಸೋ ಸೇರಿದಂತೆ ವಿವಿಧ ಪ್ರಕರಣ ದಾಖಲು

spot_img
- Advertisement -
- Advertisement -

ಬೆಳ್ತಂಗಡಿ : ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ ಕಾಮುಕನ ವಿರುದ್ಧ ಪ್ರಕರಣ ದಾಖಲಾಗಿದ್ದು ಆರೋಪಿ ಪರಾರಿಯಾಗಿರುವ ಘಟನೆ ಬೆಳ್ತಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಸುಧೀರ್‌ ಎಂಬಾತ ತನ್ನ ಮನೆಗೆ ಟಿವಿ ನೋಡಲು ಬರುತ್ತಿದ್ದ ಬಾಲಕಿಯನ್ನು ತನ್ನ ಅಜ್ಜಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಈ ವಿಚಾರ ಯಾರಿಗೂ ಹೇಳದಂತೆ ಬೆದರಿಸಿ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭವತಿಯಾದ ವಿಚಾರ ತಿಳಿಯುತ್ತಿದ್ದಂತೆ ಪಾರ್ವತಿ, ಮನೋಹರ,ಮಾದು ಮಾಮ ಎಂಬುವವರ ಸಹಾಯದೊಂದಿಗೆ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ್ದ.

ನೊಂದ ಬಾಲಕಿಗೆ ಲೈಂಗಿಕ ದೌರ್ಜನ್ಯ ಆದ ಬಗ್ಗೆ 1098  ನೇ ಚೈಲ್ಡ್ ಲೈನ್ ನಿಂದ ದಿನಾಂಕ: 30-12-2022 ರಂದು  ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ.  ಇದನ್ನು ಖಚಿತ ಪಡಿಸಲು ಸಿಡಿಪಿಒ ಕಛೇರಿಯ ಅಧಿಕಾರಿಯವರೊಂದಿಗೆ ಠಾಣಾ  ಮಹಿಳಾ ಸಿಬ್ಬಂದಿಯವರು ತೆರಳಿ ಮಾಹಿತಿ ಪಡೆಯಲು ಪ್ರಯತ್ನಿಸಿದಾಗ ಮಾಹಿತಿಯನ್ನು ನೀಡಿಲ್ಲ. ನಂತರ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಮೂಡುಬಿದ್ರೆಯ ಪ್ರಜ್ಞಾ ನಿರ್ಗತಿಕ  ಮಕ್ಕಳ ಕುಟೀರದಲ್ಲಿ ಆಪ್ತ ಸಮಾಲೋಚಕಿರವರ ಆಪ್ತ ಸಮಲೋಚನೆಯ ಬಳಿಕ ನೀಡಿದ ಮಾಹಿತಿಯಂತೆ ಇಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!