- Advertisement -
- Advertisement -
ಉತ್ತರಪ್ರದೇಶ: 9 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ ನಂತರ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ನಡೆದಿದೆ. ಇಗ್ಲಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ತಿಂಡಿ ಕೊಡಿಸುವುದಾಗಿ ಆಮಿಷ ಒಡ್ಡಿ 3 ಬಾಲಕಿಯರನ್ನು ಕರೆದುಕೊಂಡು ಹೋಗಿದ್ದಾನೆ. ಇಬ್ಬರು ಬಾಲಕಿಯರಿಗೆ ತಿಂಡಿ ಕೊಡಿಸಿ ಮನೆಗೆ ಕಳುಹಿಸಿದ್ದ. ಅನಂತರ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆ ಬಳಿಕ ಬಾಲಕಿ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದು ಶವವನ್ನು ಬಚ್ಚಿಟ್ಟಿದ್ದಾನೆ.
ಆರೋಪಿಗಳ ವಿರುದ್ಧ ಅತ್ಯಾಚಾರ ಮತ್ತು ಐಪಿಸಿಯ ಇತರ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
- Advertisement -