- Advertisement -
- Advertisement -
ಕಡಬ: ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿಯಾದ ಹಿನ್ನೆಲೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬ ತಾಲೂಕಿನ ಮರ್ದಾಳದಲ್ಲಿ ನಡೆದಿದೆ. ಮರ್ದಾಳ ಸಮೀಪದ ನಿವಾಸಿಗಳಾದ ನಂದನ್ ಹಾಗೂ ಮಾಹಿಝ್ ಬಂಧಿತ ಆರೋಪಿಗಳು.
ಕಡಬ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದಿದ್ದ ಪೊಲೀಸರು, ಪ್ರತ್ಯೇಕ 2 ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಮಂಗಳವಾರ ಸ್ಥಳ ಮಹಜರು ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Advertisement -