- Advertisement -
- Advertisement -
ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಂಭಾಗದಲ್ಲಿ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆ ಸಮಿತಿಯ ಜನಾಗ್ರಹ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯನ್ನು ಉದ್ದೇಶಿಸಿ ಮಾತನಾಡುವ ಭರದಲ್ಲಿ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಕ್ಷಿತ್ ಶಿವರಾಂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಾಲಿಗೆ ಹರಿ ಬಿಟ್ಟಿದ್ದಾರೆ.“ಮೋದಿಯವರೇ ಒಂದು ವಿಚಾರವನ್ನು ತಿಳಿದುಕೊಳ್ಳಿ. ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡಿದುಕೊಂಡು ಹೋದ್ರಲ್ವಾ ಆ ಪ್ರಸಂಗ ನಿಮಗೂ ಕೂಡ ಶೀಘ್ರದಲ್ಲಿ ಬರಲಿದೆ ಎಚ್ಚವಾಗಿರಿ” ಎಂದಿದ್ದಾರೆ. ಇದೀಗ ರಕ್ಷಿತ್ ಶಿವಾರಾಂ ಭಾಷಣದ ತುಣುಕು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ರಕ್ಷಿತ್ ಶಿವಾರಾಂ ವಿರುದ್ಧ ಜನ ಭಾರೀ ಆಕ್ರೋಶ ಹೊರ ಹಾಕುತ್ತಿದ್ದಾರೆ.
- Advertisement -