Tuesday, June 6, 2023
Homeತಾಜಾ ಸುದ್ದಿಪಿಎಂ-ಕೇರ್ಸ್ ಫಂಡ್‌ಗೆ ರತನ್‌ ಟಾಟಾ ಟ್ರಸ್ಟಿಯಾಗಿ ನೇಮಕ

ಪಿಎಂ-ಕೇರ್ಸ್ ಫಂಡ್‌ಗೆ ರತನ್‌ ಟಾಟಾ ಟ್ರಸ್ಟಿಯಾಗಿ ನೇಮಕ

- Advertisement -
- Advertisement -

ನವದೆಹಲಿ: ಉದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಪಿಎಂ-ಕೇರ್ಸ್ ಫಂಡ್ ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳ ಮಂಡಳಿಯ ಸಭೆಯ ಬಳಿಕ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್‌ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ.

- Advertisement -

Latest News

error: Content is protected !!