Sunday, June 7, 2026
Homeತಾಜಾ ಸುದ್ದಿಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾವಿಧಿವಶ

ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾವಿಧಿವಶ

- Advertisement -
- Advertisement -

ಮುಂಬೈ : ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಇನ್ನು ಕೇವಲ ನೆನಪಷ್ಟೇ. ರತನ್ ಟಾಟಾ(83) ಬುಧವಾರ ರಾತ್ರಿ 11-30ರ ಸುಮಾರಿಗೆ ನಿಧನರಾಗಿದ್ದಾರೆ. ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅಸ್ತಂಗತರಾಗಿದ್ದಾರೆ.

ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರತನ್ ಟಾಟಾ ದೂರದೃಷ್ಟಿಯ ಉದ್ಯಮಿ ಮತ್ತು ಅಸಾಧಾರಣ ವ್ಯಕ್ತಿ.

https://youtu.be/2Wa-ujnxTek

ರತನ್ ಟಾಟಾ ಜಿಯವರ ಅತ್ಯಂತ ವಿಶಿಷ್ಟವಾದ ಅಂಶವೆಂದರೆ ದೊಡ್ಡ ಕನಸುಗಳನ್ನು ಕಾಣುವ ಮತ್ತು ಇತರರಿಗೆ ಮರಳಿ ನೀಡುವ ಅವರ ಉತ್ಸಾಹ. ಅವರು ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ, ಪ್ರಾಣಿ ಕಲ್ಯಾಣ ಮುಂತಾದ ವಿಷಯಗಳನ್ನು ಮುಂದುವರಿಸುವಲ್ಲಿ ಮುಂಚೂಣಿಯಲ್ಲಿದ್ದರು.ಭಾರತದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ವ್ಯಾಪಾರ ಸಂಸ್ಥೆಗಳಲ್ಲಿ ಒಂದಾದ ಟಾಟಾ ಗ್ರೂಪ್‌ಗೆ ರತನ್ ಟಾಟಾ ಸ್ಥಿರ ನಾಯಕತ್ವವನ್ನು ಒದಗಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನು  ಸಿಎಂ ಸಿದ್ದರಾಮಯ್ಯ ಅವರು ಕೂಡ ಸಂತಾಪ ಸೂಚಿಸಿದ್ದಾರೆ. ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್‌ಸಿಪಿಎ) ಗೆ ಕೊಂಡೊಯ್ಯಲಾಗುವುದು, ಅಲ್ಲಿ ಸಾರ್ವಜನಿಕರು ಇಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಶ್ರದ್ಧಾಂಜಲಿ ಸಲ್ಲಿಸಬಹುದು.ಸಾರ್ವಜನಿಕ ದರ್ಶನದ ನಂತರ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ದು ಅಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

- Advertisement -

Latest News

error: Content is protected !!