Thursday, May 2, 2024
HomeUncategorizedರವಿ ಪೂಜಾರಿ ಜಾಮೀನು ಅರ್ಜಿ ತಿರಸ್ಕೃತ!…

ರವಿ ಪೂಜಾರಿ ಜಾಮೀನು ಅರ್ಜಿ ತಿರಸ್ಕೃತ!…

spot_img
- Advertisement -
- Advertisement -

ಬೆಂಗಳೂರು:ಕೆಲವು ತಿಂಗಳ ಹಿಂದೆ 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ವಿದೇಶದಲ್ಲಿ ಬಂಧಿಸಿ ಕರೆತರಲಾಗಿತ್ತು. ಈಗ ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

‘ಈ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷ್ಯವೇ ಇಲ್ಲ. ಕಳೆದ 8 ತಿಂಗಳಿಂದ ಬಂಧನದಲ್ಲಿದ್ದರೂ ವಿಚಾರಣಾ ಪ್ರಕ್ರಿಯೆಗಳು ಆರಂಭವಾಗಿಲ್ಲ. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಇತರ ಮೂವರನ್ನು ಸೆಷನ್ ಕೋರ್ಟ್‌ ದೋಷಮುಕ್ತಗೊಳಿಸಿದೆ’ ಎಂದು ರವಿ ಪೂಜಾರಿ ಪರ ವಕೀಲರು ವಾದಿಸಿದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್, ‘ಬೇರೆ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿದೆ ಎಂಬ ಕಾರಣಕ್ಕೆ ರವಿ ಪೂಜಾರಿ ವಿರುದ್ಧ ಸಾಕ್ಷ್ಯಗಳಿಲ್ಲ ಅಥವಾ ಆತ ದೋಷಿ ಅಲ್ಲ ಎಂದು ನಿರ್ಣಯಿಸಲು ಆಗುವುದಿಲ್ಲ. ಆತನ ವಿರುದ್ಧ ಹಲವು ಪ್ರಕರಣಗಳು ಬಾಕಿ ಇವೆ. ಜಾಮೀನು ನೀಡಿದರೆ ನಿಯಮಿತವಾಗಿ ವಿಚಾರಣೆಗೆ ಹಾಜರಾಗುವ ಬಗ್ಗೆ ಖಾತ್ರಿ ಇಲ್ಲ’ ಎಂದು ಅಭಿಪ್ರಾಯಿಸಿದರು. ಜಾಮೀನು ಅರ್ಜಿ ತಿರಸ್ಕರಿಸಿದ ಪೀಠ, ವಿಚಾರಣೆ ಚುರುಕುಗೊಳಿಸುವಂತೆ ಅಧೀನ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತು.

- Advertisement -
spot_img

Latest News

error: Content is protected !!