Thursday, June 4, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ. ಆರ್ ನೇಮಕ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ. ಆರ್ ನೇಮಕ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ನೀಡಲಾಗಿದ್ದ ಡಾ.ಕುಮಾರ್ ಅವರಿಂದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು, ಆರ್‌ಜಿಯುಎಚ್‌ಎಸ್‌ನ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಿಬಂದಿ ಮತ್ತು ತರಬೇತಿ ಇಲಾಖೆಯು ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸೂಚನೆ ನೀಡಿದೆ.

- Advertisement -

Latest News

error: Content is protected !!