Saturday, June 6, 2026
Homeಕರಾವಳಿದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ರವಿಕುಮಾರ್ ಎಂ.ಆರ್.

ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ರವಿಕುಮಾರ್ ಎಂ.ಆರ್.

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಐಎಎಸ್ ಅಧಿಕಾರಿ ರವಿಕುಮಾರ್ ಎಂ.ಆರ್. ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎಂ.ಆರ್.ರವಿಕುಮಾರ್ ಅ.31ರಂದು ದ.ಕ. ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರಿಗೆ ವರ್ಗಾವಣೆಗೊಂಡಿದ್ದಾರೆ.

- Advertisement -

Latest News

error: Content is protected !!