ನವದೆಹಲಿ: ಟೀಂ ಇಂಡಿಯಾ ಟಿ 20 ವಿಶ್ವಕಪ್ ಗೆಲ್ಲುತ್ತಲೇ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಅವರದ್ದೇ ಹಾದಿಯಲ್ಲಿ ಸಾಗಿದ್ದಾರೆ.

ಭಾರತದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ.ಹೌದು.. ಕೊಹ್ಲಿ, ರೋಹಿತ್ ಶರ್ಮಾರಂತೆಯೇ ಇದೀಗ ರವೀಂದ್ರ ಜಡೇಜಾ. ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಜಡೇಜಾ ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಅಧಿಕೃತ ಹ್ಯಾಂಡಲ್ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ. ಅಲ್ಲಿ ಅವರು ತಾನು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುತ್ತಿರುವುದನ್ನು ದೃಢಪಡಿಸಿದ್ದಾರೆ.
“ಕೃತಜ್ಞತೆ ತುಂಬಿದ ಹೃದಯದಿಂದ ನಾನು ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತಿದ್ದೇನೆ. ಹೆಮ್ಮೆಯಿಂದ ಓಡುತ್ತಿರುವ ದೃಢವಾದ ಕುದುರೆಯಂತೆ, ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ ಮತ್ತು ಇತರ ಸ್ವರೂಪಗಳಲ್ಲಿ ಅದನ್ನು ಮುಂದುವರಿಸುತ್ತೇನೆ. ಟಿ 20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಗಿದೆ, ನನ್ನ ಟಿ 20 ಅಂತರರಾಷ್ಟ್ರೀಯ ವೃತ್ತಿಜೀವನದ ಉತ್ತುಂಗವಾಗಿದೆ. ನೆನಪುಗಳು, ಹರ್ಷೋದ್ಗಾರಗಳು ಮತ್ತು ಅಚಲ ಬೆಂಬಲಕ್ಕಾಗಿ ಧನ್ಯವಾದಗಳು” ಅಂತ ತಿಳಿಸಿದ್ದಾರೆ.


