Sunday, June 7, 2026
Homeಕರಾವಳಿರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆ

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆ

- Advertisement -
- Advertisement -

ಪುತ್ತೂರು: 36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿರುವ ಆರ್ ಸಿ ನಾರಾಯಣ ರೆಂಜ ಅವರು ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ರಘು ಕೌಟಿಲ್ಯಾ ಘೋಷಿಸಿದ್ದಾರೆ.

ಆರ್ ಸಿ ನಾರಾಯಣ ರೆಂಜ ಅವರು ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ನಂ ವನ್ ಜಿಲ್ಲೆಯಾಗಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿತ್ತು. ಬೂತ್ ನಿಂದ ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎಬಿವಿಪಿಯಲ್ಲಿ ತಾಲೂಕು ಅಧ್ಯಕ್ಷರಾಗಿ ನಂತರ ಬಿಜೆಪಿ ಮಂಡಲ ಉಪಾಧ್ಯಕ್ಷರಾಗಿ, ಮಾಧ್ಯಮ ವಕ್ತರಾರಾಗಿ, ಬಿಜೆಪಿ ಯುವಮೋರ್ಚಾದ ಮಂಡಲ ಉಪಾಧ್ಯಕ್ಷರಾಗಿ ನಂತರ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಮಾಧ್ಯಮ ಪ್ರಮುಖರಾಗಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ಹೀಗೆ ಸಂಘಟನೆಗೆ ಅನೇಕ ರೀತಿಯಲ್ಲಿ ತಮ್ಮ ಸೇವೆಯನ್ನು ನೀಡಿದ್ದಾರೆ.

ಹೀಗೆ ಇವರ ಸಂಘಟನಾ ಕಾರ್ಯಕ್ಕೆ ರಾಜ್ಯಮಟ್ಟದ ಜವಾಬ್ದಾರಿ ಒಲಿದು ಬಂದಿರುವುದು ಎಲ್ಲರಿಗೂ ಖುಷಿ ನೀಡಿದೆ.

- Advertisement -

Latest News

error: Content is protected !!