Wednesday, June 24, 2026
Homeತಾಜಾ ಸುದ್ದಿಕಾಲ್ತುಳಿತಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಆರ್‌ಸಿಬಿ

ಕಾಲ್ತುಳಿತಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಆರ್‌ಸಿಬಿ

- Advertisement -
- Advertisement -

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ರಾಯಲ್‌ ಚಾಲೆಂಜರ್‌ರ‍ಸ ತಂಡ ಸಂತ್ರಸ್ತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.

ಆರ್‌ಸಿಬಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ಸಂತ್ರಸ್ತ ಕುಟುಂಬಗಳಿಗೆ ನಾವು ನೀಡುತ್ತಿರುವುದು ಆರ್ಥಿಕ ನೆರವಲ್ಲ. ತಮ್ಮವರನ್ನು ಕಳೆದುಕೊಂಡವರ ಕುಟುಂಬಗಳಿಗೆ ನಾವು ಕೊಡುತ್ತಿರುವುದು ಕಾಳಜಿ ಮತ್ತು ಸಹಾನುಭೂತಿಯ ಫಲ ಎಂದು ಘೋಷಣೆ ಮಾಡಿದೆ.

ಕಳೆದ ಜೂ.4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಕೇಳಿ ನಮ್ಮ ಹೃದಯಗಳು ಛಿದ್ರವಾಗಿಸಿವೆ. ಈ ಘಟನೆ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ.

- Advertisement -

Latest News

error: Content is protected !!