Friday, June 5, 2026
Homeತಾಜಾ ಸುದ್ದಿಗ್ರಾ.ಪಂ. ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಸಹಾಯಕ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇರ ನೇಮಕಾತಿಗೆ ತಡೆ

ಗ್ರಾ.ಪಂ. ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಸಹಾಯಕ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇರ ನೇಮಕಾತಿಗೆ ತಡೆ

- Advertisement -
- Advertisement -

ಬೆಂಗಳೂರು: ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ(ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವೃಂದಕ್ಕೆ ಸೇವೆಯೊಳಗಿನ ನೇರ ನೇಮಕಾತಿಯನ್ನು ತಡೆ ಹಿಡಿಯಲು ರಾಜ್ಯ ಸರ್ಕಾರ ಸೂಚಿಸಿದೆ.

ತಾತ್ಕಾಲಿಕವಾಗಿ ತಡೆ ನೀಡಿ‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ನೇರ ನೇಮಕಾತಿಗೆ ತಡೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಗ್ರಾಮ ಪಂಚಾಯತ್ ನೌಕರರ ಸಂಘ ಮನವಿ ಸಲ್ಲಿಸಿತ್ತು.

ಇದೇ ವೇಳೆ ನೇಮಕಾತಿ ಬಗ್ಗೆ ಏಕರೂಪ ಮಾರ್ಗಸೂಚಿಯ‌ನ್ನು ಹೊರಡಿಸುವ ಬಗ್ಗೆ ರಾಜ್ಯ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುವುದರಿಂದ ತಾತ್ಕಾಲಿಕ ತಡೆ ನೀಡಲಾಗಿದೆ.

ಈಗಾಗಲೇ ನೇಮಕಾತಿ ಮಾಡಿರುವ ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ನೇಮಕಾತಿಗೆ ತಾತ್ಕಾಲಿಕ ತಡೆಗೆ ಗ್ರಾಮೀಣಾಭಿವೃದ್ಧಿ‌ ಇಲಾಖೆ ಸೂಚನೆ ನೀಡಿದೆ.

- Advertisement -

Latest News

error: Content is protected !!