Saturday, May 11, 2024
Homeತಾಜಾ ಸುದ್ದಿಪಿಎಸ್ಐ ನೇಮಕಾತಿ ಮರು ಪರೀಕ್ಷೆ ನಡೆಸುವ ಬಗ್ಗೆ ಶೀಘ್ರ ತೀರ್ಮಾನ: ಗೃಹ ಸಚಿವ ಆರಗ ಜ್ಞಾನೇಂದ್ರ...

ಪಿಎಸ್ಐ ನೇಮಕಾತಿ ಮರು ಪರೀಕ್ಷೆ ನಡೆಸುವ ಬಗ್ಗೆ ಶೀಘ್ರ ತೀರ್ಮಾನ: ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ

spot_img
- Advertisement -
- Advertisement -

ಬೆಂಗಳೂರು: ರದ್ದುಪಡಿಸಿರುವ ಪಿಎಸ್ಐ ಪರೀಕ್ಷೆಯ ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಜಯಮಹಲ್ ನಲ್ಲಿರುವ ತಮ್ಮ ಸರ್ಕಾರಿ ನಿವಾಸದಲ್ಲಿ ಭೇಟಿಯಾದ ಪಿಎಸ್ ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳಿಗೆ, ಈ ಕುರಿತು ಭರವಸೆ ನೀಡಿದ್ದು, ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲಾ 56000 ಅಭ್ಯರ್ಥಿ ಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದ್ದಾರೆ.

ಮರು ಪರೀಕ್ಷೆ ನಡೆಸುವುದು ತಡವಾದರೆ ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರೆಸಿ, ಎಂದು ಗೃಹ ಸಚಿವರು ಅಭ್ಯರ್ಥಿಗಳಿಗೆ ಸಲಹೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!