Friday, May 17, 2024
Homeಕರಾವಳಿಉಡುಪಿಮಣಿಪಾಲ: ಮಕ್ಕಳ ಅಸ್ಥಿ ಮಜ್ಜೆಯ ಕಸಿ ಯಶಸ್ವಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇಬ್ಬರು ಮಕ್ಕಳಿಗೆ ಪುನರ್ಜನ್ಮ: ಕೆಎಂಸಿ...

ಮಣಿಪಾಲ: ಮಕ್ಕಳ ಅಸ್ಥಿ ಮಜ್ಜೆಯ ಕಸಿ ಯಶಸ್ವಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇಬ್ಬರು ಮಕ್ಕಳಿಗೆ ಪುನರ್ಜನ್ಮ: ಕೆಎಂಸಿ ಆಸ್ಪತ್ರೆಯಲ್ಲಿ ಯಶಸ್ಸಿನ ಸಂಭ್ರಮಾಚರಣೆ

spot_img
- Advertisement -
- Advertisement -

ಮಣಿಪಾಲ: ಮಣಿಪಾಲದಲ್ಲಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ  ಮಕ್ಕಳ ರಕ್ತಶಾಸ್ತ್ರ  ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿಯನ್ನು ಯಶಸ್ವಿಯಾಗಿ ನಡೆಸಿದೆ.

ರಕ್ತ ಕ್ಯಾನ್ಸರ್ ಗೆ ತುತ್ತಾಗಿದ್ದ ಪ್ರಣಮ್ ಮತ್ತು ನಿರುಪ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರೂ ಬಾಲಕರಿಗೆ ಅಸ್ಥಿಮಜ್ಜೆ ಕಸಿ ಮೂಲಕ ರೋಗವನ್ನು ಗುಣಪಡಿದಿದ್ದಾರೆ.

ಈ ಕುರಿತ ಯಶಸ್ಸಿನ ಕಾರ್ಯಕ್ರಮದಲ್ಲಿ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. 

ಅಸ್ಥಿಮಜ್ಜೆ ಕಸಿ ವಿವಿಧ ಬಗೆಯ  ಕ್ಯಾನ್ಸರ್ ಮತ್ತು ರಕ್ತ ಸಂಬಂಧಿ ಅಸ್ವಸ್ಥತೆಗಳಿಗೆ ಜೀವರಕ್ಷಕ ವಿಧಾನವಾಗಿದೆ. ಇಂತಹ ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯನ್ನು ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರುಗಳಲ್ಲಿ ಮಾತ್ರ ನಡೆಸಲಾಗುತಿತ್ತು. ಈಗ ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲವು ಮಕ್ಕಳಿಗಾಗಿ ಈ ಸುಸಜ್ಜಿತ ಸೇವೆಗಳನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು. 

- Advertisement -
spot_img

Latest News

error: Content is protected !!