Thursday, June 25, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 18‌ ರಂದು ರೆಡ್ ಅಲರ್ಟ್ ; ಜಿಲ್ಲಾ ಮತ್ತು ತಾಲೂಕು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 18‌ ರಂದು ರೆಡ್ ಅಲರ್ಟ್ ; ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಡಿಸಿ ಆದೇಶ

- Advertisement -
- Advertisement -

ಮಂಗಳೂರು: ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 18 ರಂದು ರೆಡ್ ಅಲರ್ಟ್, ಮೇ 17 ಮತ್ತು 19 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಮೂರು ದಿನಗಳಲ್ಲಿ ಪ್ರತಿ ದಿನ ಜಿಲ್ಲೆಯಲ್ಲಿ 100 ರಿಂದ 150 ಮಿಲಿ ಮೀಟರ್ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ.‌

ಹೀಗಾಗಿ ಪ್ರವಾಸಿಗರು ನದಿ ತೀರ, ಸಮುದ್ರ ತೀರಕ್ಕೆ ಹೋಗದಂತೆ ಸೂಚಿಸಲಾಗಿದ್ದು, ಮೀನುಗಾರರು ಮೂರು ದಿನಗಳಂದು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ತಿಳಿಸಲಾಗಿದೆ.

ಅಲ್ಲದೇ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಇದೇ ವೇಳೆ ತುರ್ತು ಸೇವೆಗೆ ಸಾರ್ವಜನಿಕರು 24 ಗಂಟೆಗಳ ಕಂಟ್ರೋಲ್ ರೂಂ ಟೋಲ್ ಫ್ರೀ ಸಂಖ್ಯೆ 1077 ಸಂಪರ್ಕಿಸಬಹುದಾಗಿದೆ.

- Advertisement -

Latest News

error: Content is protected !!