Wednesday, June 3, 2026
Homeಕರಾವಳಿಉಡುಪಿರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ; ದಕ್ಷಿಣಕನ್ನಡ ಸೇರಿದಂತೆ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ; ದಕ್ಷಿಣಕನ್ನಡ ಸೇರಿದಂತೆ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ದಕ್ಷಿಣಕನ್ನಡ ಸೇರಿದಂತೆ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಾಲಾಗಿದೆ..

ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಮೈಸೂರು, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್‌, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇನ್ನು ನಾಳೆ ಕರಾವಳಿ ಸೇರಿದಂತೆ ಉತ್ತರ ಕರ್ನಾಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಾಳೆ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!