Thursday, June 4, 2026
Homeಕರಾವಳಿಕರಾವಳಿಯ ವಿವಿಧೆಡೆ ಉತ್ತಮ ಮಳೆ; ದ.ಕ ಜಿಲ್ಲೆಯಲ್ಲಿ ಇಂದು ರೆಡ್‌ ಅಲರ್ಟ್‌

ಕರಾವಳಿಯ ವಿವಿಧೆಡೆ ಉತ್ತಮ ಮಳೆ; ದ.ಕ ಜಿಲ್ಲೆಯಲ್ಲಿ ಇಂದು ರೆಡ್‌ ಅಲರ್ಟ್‌

- Advertisement -
- Advertisement -

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಮಳೆ ಸುರಿಯುತ್ತಿದ್ದು, ಸೋಮವಾರದಂದು ಹಗಲು ವೇಳೆಯಲ್ಲೂ ಸ್ವಲ್ಪ ಮಳೆಯಾಗಿದೆ. ಸೆ. 24 ಮಂಗಳವಾರದಂದು ಭಾರತೀಯ ಹವಾಮಾನ ಇಲಾಖೆ ಕರಾವಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇನ್ನು ಬುಧವಾರದಂದು ಕೂಡ ಮಳೆಯಾಗುವಂತಹ ಸಾಧ್ಯತೆಯಿದ್ದು, ಎಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಪುತ್ತೂರು, ಬೆಳ್ಳಾರೆ ಭಾಗದಲ್ಲಿ ಬಿರುಸಿನ ಮಳೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಧ್ಯಾಹ್ನ ಬಳಿಕ ಸಾಧಾರಣ ಮಳೆಯಾಗಿದೆ. ಬಂಟ್ವಾಳದಲ್ಲಿ ರಾತ್ರಿ ಮಳೆ ಆರಂಭವಾಗಿದೆ. ಇನ್ನು ಮುಂಜಾನೆ ವೇಳೆಯಲ್ಲಿ ಜಿಲ್ಲೆಯ ಅಲ್ಲಲ್ಲಿ ಮಳೆ ಸುರಿದಿದ್ದು, ಬಳಿಕ ಮೋಡ ಕವಿದ ಬಿಸಿಲಿನ ವಾತಾವರಣವಿತ್ತು. ಸಂಜೆಯಾಗುತ್ತಲೇ ದಟ್ಟ ಮೋಡ ಕವಿದು ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆಯಾಗಿದೆ.

- Advertisement -

Latest News

error: Content is protected !!