Saturday, June 6, 2026
Homeತಾಜಾ ಸುದ್ದಿಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ: ಹೆಚ್ ಡಿ ಕೆ ಟ್ವೀಟ್

ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ: ಹೆಚ್ ಡಿ ಕೆ ಟ್ವೀಟ್

- Advertisement -
- Advertisement -

ಬೆಂಗಳೂರು: ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ. ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ ಕೇವಲ ಕಾಗದದ ಮೇಲೆ ಅಥವಾ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಹೆಣ್ಣುಮಗುವಿಗೆ ಶಿಕ್ಷಣ ಕೊಡದಿದ್ದರೆ ದೇಶವನ್ನು ಕತ್ತಲೆಗೆ ದೂಡಿದಂತೆ ಎನ್ನುವುದನ್ನು ಯಾರೂ ಮರೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಇಂದಿನಿಂದ ಆರಂಭವಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕು ಎಂದು ಸಲಹೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಪರೀಕ್ಷೆ ತಪ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಮಕ್ಕಳ ಭಾವನೆಗಳನ್ನು ಗೌರವಿಸಿ ಉಂಟಾಗಿರುವ ಗೊಂದಲಮಯ ವಾತಾವರಣವನ್ನು ತಿಳಿಗೊಳಿಸುವ ಸಂದರ್ಭ ಬಂದೇ ಬರುತ್ತದೆ ಎಂದಿದ್ದಾರೆ.

ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಕಳೆದ ಕೆಲ ದಿನಗಳಲ್ಲಿ ಉಂಟಾದ ಅಹಿತಕರ ಘಟನೆಗಳ ಬಗ್ಗೆ ಮಕ್ಕಳು ತಲೆಕೆಡಿಸಿಕೊಳ್ಳುವುದು ಬೇಡ. ಭವಿಷ್ಯ ಮುಖ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು. ಪೋಷಕರು ಕೂಡ ನಿರ್ಲಕ್ಷ್ಯ ಮಾಡಬಾರದು. ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!