Friday, May 3, 2024
Homeಉದ್ಯಮರಿಲಾಯನ್ಸ್ ಜಿಯೋ ಪ್ಲಾಟ್‌ಫಾರ್ಮ್ಸ್: ಕೆಕೆಆರ್ ನಿಂದ 11,367 ಕೋಟಿ ರೂ. ಹೂಡಿಕೆ

ರಿಲಾಯನ್ಸ್ ಜಿಯೋ ಪ್ಲಾಟ್‌ಫಾರ್ಮ್ಸ್: ಕೆಕೆಆರ್ ನಿಂದ 11,367 ಕೋಟಿ ರೂ. ಹೂಡಿಕೆ

spot_img
- Advertisement -
- Advertisement -

ಮುಂಬೈ : ಮುಖೇಶ್ ಅಂಬಾನಿ ನೇತೃತ್ವದ ರಿಲಾಯನ್ಸ್ ಜಿಯೋವೇದಿಕೆ 5ನೇ ಬಹುದೊಡ್ಡ ಹೂಡಿಕೆಕುದುರಿಸಿದೆ . ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (“ರಿಲಯನ್ಸ್ ಇಂಡಸ್ಟ್ರೀಸ್”) ಹಾಗೂ ಭಾರತದ ಮುಂಚೂಣಿ ಡಿಜಿಟಲ್ ಸೇವೆಗಳ ವೇದಿಕೆ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ (“ಜಿಯೋ ಪ್ಲಾಟ್‌ಫಾರ್ಮ್ಸ್”) ನಲ್ಲಿ ಜಾಗತಿಕ ಹೂಡಿಕೆ ಸಂಸ್ಥೆ ಕೆಕೆಆರ್ 11,367 ಕೋಟಿ ರೂ.ಗಳ ಹೂಡಿಕೆಯನ್ನು ಘೋಷಿಸಿವೆ..


ಈ ಹೂಡಿಕೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನ ಈಕ್ವಿಟಿ ಮೌಲ್ಯವನ್ನು 4.91 ಲಕ್ಷ ಕೋಟಿ ರೂ.ಗಳಿಗೆ ಹಾಗೂ ಎಂಟರ್‌ಪ್ರೈಸ್ ಮೌಲ್ಯವನ್ನು 5.16 ಲಕ್ಷ ಕೋಟಿ ರೂ.ಗಳಿಗೆ ಕೊಂಡೊಯ್ಯಲಿದೆ. ಜಾಗತಿಕ ಹೂಡಿಕೆ ಸಂಸ್ಥೆ ಕೆಕೆಆರ್ ಫುಲ್ಲಿ ಡೈಲ್ಯೂಟೆಡ್ ಬೇಸಿಸ್‌ನಲ್ಲಿ ಜಿಯೋ ಪ್ಲಾಟ್‌ಫಾರ್ಮ್ಸ್‌ನ 2.32% ಈಕ್ವಿಟಿ ಪಾಲುದಾರಿಕೆಗೆ ಸಮಾನವಾಗಿರಲಿದೆ.
ಈ ಹೂಡಿಕೆಯೊಂದಿಗೆ, ನಾಲ್ಕು ವಾರಗಳಿಗೂ ಕಡಿಮೆ ಅವಧಿಯಲ್ಲಿ ಫೇಸ್‌ಬುಕ್, ಸಿಲ್ವರ್ ಲೇಕ್, ವಿಸ್ತಾ ಈಕ್ವಿಟಿ ಪಾರ್ಟ್‌ನರ್ಸ್ ಹಾಗೂ ಜನರಲ್ ಅಟ್ಲಾಂಟಿಕ್ ಸೇರಿದಂತೆ ಪ್ರಮುಖ ತಂತ್ರಜ್ಞಾನ ಹೂಡಿಕೆದಾರರಿಂದ ಜಿಯೋ ಪ್ಲಾಟ್‌ಫಾರ್ಮ್ಸ್ 78,562 ಕೋಟಿ ರೂ. ಹೂಡಿಕೆ ಪಡೆದುಕೊಂಡಿದೆ.

- Advertisement -
spot_img

Latest News

error: Content is protected !!