Saturday, June 6, 2026
Homeಕರಾವಳಿಮಂಗಳೂರು: ರೆಮೋನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

ಮಂಗಳೂರು: ರೆಮೋನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

- Advertisement -
- Advertisement -

ಮಂಗಳೂರು: ಭರತನಾಟ್ಯ ಕಲಾವಿದೆ ರೆಮೋನಾ ಪರೇರಾ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಸೋಮವಾರ ಸ್ವೀಕರಿಸಿದರು.

ಮಂಗಳೂರಿನ ಜಿ.ಪಂ ಸಭಾಂಗಣದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ತಮ್ಮ ತಾಯಿ ಹಾಗೂ ಸೋದರನೊಂದಿಗೆ ರೆಮೋನಾ ಪಾಲ್ಗೊಂಡರಲ್ಲದೆ ಪ್ರಧಾನಿಯವರೊಂದಿಗೆ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ವಿಜೇತ ರಾಜ್ಯದ ಏಕೈಕ ಬಾಲಕಿ ರೆಮೋನಾ ಪರೇರಾ ಅವರಿಗೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ನವದೆಹಲಿಯಿಂದ ಡಿಜಿಟಲ್ ಮಾದ್ಯಮದ ಮೂಲಕ ಪ್ರಶಸ್ತಿ ವಿತರಿಸಿದರು.

2022ರ ಸಾಲಿನ ರಾಷ್ಟ್ರೀಯ ಬಾಲಪುರಸ್ಕಾರ(ಕಲೆ ಮತ್ತು ಸಂಸ್ಕೃತಿ ವಿಭಾಗ)ಕ್ಕೆ ರಾಜ್ಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ರೆಮೋನಾ ಮಂಗಳೂರಿನ ಪದುವ ಪಿಯು ಕಾಲೇಜಿನ ವಿದ್ಯಾರ್ಥಿನಿ. 16 ರಾಜ್ಯಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ 20 ಪ್ರಶಸ್ತಿ ಪಡೆದುಕೊಂಡವರು. ಮಂಗಳೂರಿನ ನೃತ್ಯಗುರು ಡಾ.ಶ್ರೀವಿದ್ಯಾ ಮುರಳೀಧರ್‌ ಅವರ ಶಿಷ್ಯೆಯಾಗಿದ್ದಾರೆ.

- Advertisement -

Latest News

error: Content is protected !!