- Advertisement -
![]()
- Advertisement -
ಬೆಂಗಳೂರು: ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ ಒಟ್ಟು 13 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಸ್ನೇಹಿತೆ ಪವಿತ್ರ ಗೌಡ ಸೇರಿ ಇದೀಗ 13 ಜನರನ್ನು ಬಂಧಿಸಲಾಗಿದೆ. ಇನ್ನು ಮೃತ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ, “ಜೂನ್ 9 ರಂದು ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಇದೀಗ 13 ಜನರನ್ನು ಬಂಧಿಸಲಾಗಿದೆ. ಒಬ್ಬ ನಟನನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.
- Advertisement -


