Wednesday, July 15, 2026
Homeತಾಜಾ ಸುದ್ದಿಗೆಲುವಿನ ನಿರೀಕ್ಷೆಯಲ್ಲಿದ್ದ ರೇಣುಕಾಚಾರ್ಯಗೆ ಭಾರೀ ನಿರಾಸೆ; ರಾಜಕೀಯ ನಿವೃತ್ತಿ ಘೋಷಿಸಿದ ಹೊನ್ನಾಳಿ ಹುಲಿ

ಗೆಲುವಿನ ನಿರೀಕ್ಷೆಯಲ್ಲಿದ್ದ ರೇಣುಕಾಚಾರ್ಯಗೆ ಭಾರೀ ನಿರಾಸೆ; ರಾಜಕೀಯ ನಿವೃತ್ತಿ ಘೋಷಿಸಿದ ಹೊನ್ನಾಳಿ ಹುಲಿ

- Advertisement -
- Advertisement -

ದಾವಣಗೆರೆ : ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಗೆಲುವಿನ ನಿರೀಕ್ಷೆಯಲ್ಲಿದ್ದ ಹಲವರಿಗೆ ಬಹುದೊಡ್ಡ ನಿರಾಸೆ ಉಂಟು ಮಾಡಿದೆ. ಅದರಲ್ಲೂ ದಾವಣಗೆರೆಯ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸೋಲು ಹಲವರಿಗೆ ಅಚ್ಚರಿ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಬೆಂಬಲಿಗರ ಜೊತೆಗೆ ಮಾತನಾಡಿದ ರೇಣುಕಾಚಾರ್ಯ, ಹೊನ್ನಾಳಿ ಕ್ಷೇತ್ರದಲ್ಲಿ ಕೋವಿಡ್ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದರೂ ಜನರು ನನ್ನನ್ನು ಸೋಲಿಸಿದ್ದಾರೆ ಎಂದು ಭಾವುಕರಾಗಿದ್ದಾರೆ. ಇನ್ಮುಂದೆ ನಾನು ಚುನಾವಣಾ ರಾಜಕೀಯದಲ್ಲಿ ಮುಂದುವರೆಯುವುದಿಲ್ಲ, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಪಿ. ರೇಣುಕಾಚಾರ್ಯ, ಕಾಂಗ್ರೆಸ್ ಅಭ್ಯರ್ಥಿ ಡಿ.ಜೆ. ಶಾಂತನಗೌಡ ವಿರುದ್ಧ ಸೋಲು ಕಂಡಿದ್ದಾರೆ.

- Advertisement -

Latest News

error: Content is protected !!