Wednesday, June 24, 2026
Homeತಾಜಾ ಸುದ್ದಿಕೋತಿದಾಳಿಯಿಂದ ಸ್ವಲ್ಪದರಲ್ಲಿ ಪಾರಾದ ರೇಣುಕಾಚಾರ್ಯ!… ನಡೆದಿದ್ದೇನು ಗೊತ್ತಾ?

ಕೋತಿದಾಳಿಯಿಂದ ಸ್ವಲ್ಪದರಲ್ಲಿ ಪಾರಾದ ರೇಣುಕಾಚಾರ್ಯ!… ನಡೆದಿದ್ದೇನು ಗೊತ್ತಾ?

- Advertisement -
- Advertisement -

ದಾವಣಗೆರೆ : ಹೊನ್ನಾಳಿ ಪಟ್ಟಣದಲ್ಲಿ ಕೋತಿಗಳ ಉಪಟಳ ಮಿತಿಮೀರಿದ್ದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು ಕೋತಿದಾಳಿಯಿಂದ ಸ್ವಲ್ಪದರಲ್ಲಿ ಪಾರಾಗಿರುವ ಘಟನೆ ವರದಿಯಾಗಿದೆ.. ಅವರು ಪಟ್ಟಣದ ತಾಲೂಕು ಕಚೇರಿ ಬಳಿ ತಮ್ಮ ಬೆಂಬಲಿಗರ ಜೊತೆಗೆ ಮಾತನಾಡುತ್ತಿದ್ದ ವೇಳೆಯಲ್ಲಿ ಅಲ್ಲೇ ಇದ್ದ ಕೋತಿಯೊಂದು ಏಕಾಏಕಿ ಅವರ ಮೇಲೆ ದಾಳಿ ಮಾಡಲು ಮುಂದಾಗಿದೆ.ಆದರೆ ಆ ಕೂಡಲೇ ಅವರ ಜೊತೆಗಾರರು ಶಾಸಕರನ್ನು ಕೋತಿಯಿಂದ ಪಾರು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕೋತಿಯು ಸುಮಾರು ಎರಡು ತಿಂಗಳಿನಿಂದ ಪಟ್ಟಣದಲ್ಲಿ ಜನರಿಗೆ ಉಪಟಳ ನೀಡುತ್ತಿದೆ. ಸಿಕ್ಕ ಸಿಕ್ಕವರ ಮೇಲೆ ಹಾರಿ ಪರಚಿ ಅವರ ಬಳಿ ಇರುವ ವಸ್ತಗಳನ್ನು ಕಿತ್ತುಕೊಳ್ಳುತ್ತಿದ್ದು ಕೋತಿಯನ್ನು ಹಿಡಿದು ಕಾಡಿಗೆ ಬಿಡಬೇಕು ಎಂದು ಸ್ಥಳೀಯ ಅಡಳಿತಕ್ಕೆ ಹಾಗೂ ಅರಣ್ಯ ಇಲಾಖೆಗೆ ಮನವಿ ಮಾಡಲಾಗಿದೆ.

- Advertisement -

Latest News

error: Content is protected !!