- Advertisement -
- Advertisement -
ಸುಳ್ಯ: ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ಬಿ ಅಧ್ಯಕ್ಷ ಡಾ. ಕೆ.ವಿ. ರೇಣುಕಾಪ್ರಸಾದ್ ಆಯ್ಕೆಯಾಗಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿ. ಕೆಂಚಪ್ಪಗೌಡ, ಉಪಾಧ್ಯಕ್ಷರಾಗಿ ಎಲ್. ಶ್ರೀನಿವಾಸ ಮತ್ತು ಕೆ.ವಿ. ರೇಣುಕಾಪ್ರಸಾದ್ ಆಯ್ಕೆಯಾಗಿದ್ದಾರೆ. ರೇಣುಕಾಪ್ರಸಾದ್ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಟಿ. ಕೋನಪ್ಪ ರೆಡ್ಡಿ, ಸಹಾಯಕ ಕಾರ್ಯದರ್ಶಿಯಾಗಿ ಹನುಮಂತರಾಯಪ್ಪ ಆರ್. ಮತ್ತು ಖಜಾಂಚಿಯಾಗಿ ಎನ್. ಬಾಲಕೃಷ್ಣ ಆಯ್ಕೆಯಾಗಿದ್ದಾರೆ.
- Advertisement -