ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಆರೋಪಿ ನಟ ದರ್ಶನ್ ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟಿಗೆ ವಿಚಾರಣೆಗೆ ಹಾಜರಾದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಆಗಸ್ಟ್ 12ಕ್ಕೆ ವಿಚಾರಣೆ ಮುಂದೂಡಿದೆ. ಅಲ್ಲದೇ ಆಗಸ್ಟ್ 12ರಂದು ಎಲ್ಲಾ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶ ಹೊರಡಿಸಿದೆ.
ಇಂದು ನಟ ದರ್ಶನ್ ಎ1 ಆರೋಪಿ ಪವಿತ್ರಗೌಡ, ಧನರಾಜ್, ವಿನಯ್ ಮತ್ತು ಕಾರ್ತಿಕ್ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಆಗಸ್ಟ್ 12ಕ್ಕೆ ವಿಚಾರಣೆ ಮುಂದೂಡಿದೆ.
ನಟ ದರ್ಶನವರು ಸದ್ಯ ಡೆವಿಲ್ ಸಿನಿಮಾ ಚಿತ್ರೀಕರಣದಲ್ಲಿ ಬಿಜಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ವಿದೇಶಕ್ಕೆ ತೆರಳಲು ಅನುಮತಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಕೋರ್ಟ್ ಜುಲೈ 1ರಿಂದ 25ರ ವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿತ್ತು, ಆದರೆ ನಟ ದರ್ಶನ್ ಅವರು ಮತ್ತೊಮ್ಮೆ ಅರ್ಜಿ ಸಲ್ಲಿಸಿ ದಿನಾಂಕ ಬದಲಾವಣೆ ಮಾಡಿ ಕೋರಿದ್ದರು. ಇದೀಗ ನಟ ದರ್ಶನ್ ಅವರಿಗೆ ಜುಲೈ 11 ರಿಂದ 30ರವರೆಗೆ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ ನೀಡಿದೆ.