Sunday, June 7, 2026
Homeಅಪರಾಧರೇಣುಕಾಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್ ರದ್ದು ಸಾಧ್ಯತೆ; ಡಿಸಿಪಿಯಿಂದ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್ ರದ್ದು ಸಾಧ್ಯತೆ; ಡಿಸಿಪಿಯಿಂದ ನೋಟಿಸ್ ಜಾರಿ

- Advertisement -
- Advertisement -

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಪರವಾನಗಿ ಗನ್ ಬಳಸಿ ಪ್ರಕರಣ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿದ್ದು, ಈ ನಿಟ್ಟಿನಲ್ಲಿ ನಟನ ಬಳಿಯಿರುವ ಗನ್ ಲೈಸೆನ್ಸ್’ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ.

ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ಕೊಲೆ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್ ಅವರಿಗೆ, ‘ಪರವಾನಗಿ ಗನ್ ಬಳಸಿ ಪ್ರಕರಣ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಿಮ್ಮ ಗನ್ ಲೈಸೆನ್ಸ್ ಏಕೆ ರದ್ದುಗೊಳಿಸಬಾರದು,’ ಎಂದು ಪ್ರಶ್ನಿಸಿ ನಟನಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಇನ್ನು ನೋಟಿಸ್ ತಲುಪಿದ 7 ದಿನಗಳೊಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಕೆಲ ವರ್ಷಗಳ ಹಿಂದೆ ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪಡೆದಿದ್ದರು. ಇದೀಗ ನೋಟಿಸ್ ಗೆ ದರ್ಶನ್ ಸ್ಪಷ್ಟನೆ ನೀಡಿದ ಬಳಿಕ ಅದನ್ನು ಪರಿಶೀಲಿಸಿ ಗನ್ ಲೈಸೆನ್ಸ್ ಹಿಂಪಡೆಯುವ ಬಗ್ಗೆ ಪೊಲೀಸರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!