Wednesday, June 24, 2026
Homeಅಪರಾಧರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಚಾರಣೆ ನವೆಂಬರ್.‌19ಕ್ಕೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಚಾರಣೆ ನವೆಂಬರ್.‌19ಕ್ಕೆ ಮುಂದೂಡಿಕೆ

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಇತರೆ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದು, ವಿಚಾರಣೆಯನ್ನು ನ್ಯಾಯಾಲಯ ನವೆಂಬರ್.‌19ಕ್ಕೆ ಮುಂದೂಡಿಕೆ ಮಾಡಲಾಗಿದೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿ ನಟ ದರ್ಶನ್ ಹಾಗೂ ಇತರೆ ಆರೋಪಿಗಳು ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಸಿಆರ್‌ಪಿಸಿ ಸೆಕ್ಷನ್‌ 294 ಅಡಿ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದ್ದು, ಸಿಆರ್‌ಪಿಸಿ ಸೆಕ್ಷನ್‌ 294ರ ಅಡಿ ಎಸ್‌ಪಿಪಿ ಸಚನ್‌ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಬಗ್ಗೆ ಪ್ರತಿಕ್ರಿಯೆ ನೀಡಲು ದರ್ಶನ್‌ ಸೇರಿದಂತೆ ಆರೋಪಿಗಳ ಪರ ವಕೀಲರು ಕಾಲಾವಕಾಶ ಕೋರಿದರು. 5000ಕ್ಕೂ ಹೆಚ್ಚಿನ ದಾಖಲೆಗಳು ಇರುವುದರಿಂದ 15 ದಿನ ಸಮಯಕ್ಕೆ ಮನವಿ ಮಾಡಿದರು. ಬಳಿಕ 57ನೇ ಸಿಸಿಎಚ್‌ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್.‌19ಕ್ಕೆ ಮುಂದೂಡಿಕೆ ಮಾಡಿದೆ.

- Advertisement -

Latest News

error: Content is protected !!