Wednesday, June 3, 2026
Homeಅಪರಾಧರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಜಾಮೀನು ಅರ್ಜಿ ಮುಂದೂಡಿದ ಹೈಕೋರ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಜಾಮೀನು ಅರ್ಜಿ ಮುಂದೂಡಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರ ಜಾಮೀನು ಅರ್ಜಿಯ ವಿಚಾರಣೆಯು ಹೈಕೋರ್ಟ್ ನಲ್ಲಿ ನ.21 ಗುರುವಾರದಂದು ನಡೆದಿದ್ದು, ವೈದ್ಯಕೀಯ ಕಾರಣಗಳಿಂದ ನ.26ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ದರ್ಶನ್‌ ಬೆನ್ನುನೋವಿಗೂ ಮೊದಲು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ವಿಶ್ವಜಿತ್ ಶೆಟ್ಟಿ ಅವರಿರುವ  ಏಕಸದಸ್ಯ ಪೀಠದಲ್ಲಿ ನಡೆದಿದೆ. ಈ ವೇಳೆಯಲ್ಲಿ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪೊಲೀಸರ ಪರ ವೈದ್ಯಕೀಯ ವರದಿಯ ಪ್ರತಿ ತಮಗೆ ನೀಡಿಲ್ಲವೆಂದು ವಾದ ಮಂಡಿಸಿದ್ದಾರೆ.

ದರ್ಶನ್ ಗೆ ಮಧ್ಯಂತರ ಜಾಮೀನು ಅನ್ನು 6 ವಾರಗಳ ಷರತ್ತಿನ ಮೇಲೆ ನೀಡಲಾಗಿದೆ. ಆದರೆ ಸರ್ಜರಿಯ ದಿನಾಂಕವನ್ನು ಇದುವರೆಗೆ ನಿಗದಿಪಡಿಸಿಲ್ಲವೆಂದು ಅವರು ಹೇಳಿದ್ದಾರೆ. ಇದಲ್ಲದೆ ಹೆಚ್ಚುವರಿ ಆರೋಪ ಪಟ್ಟಿ ವಿಚಾರಣಾ ಕೋರ್ಟಿಗೆ ಸಲ್ಲಿಕೆ ಮಾಡಲಾಗಿದೆ. ದರ್ಶನ್‌ ಪರ ವಕೀಲರು ವೈದ್ಯಕೀಯ ವರದಿಯ ಪ್ರತಿ ಕೋರ್ಟ್‌ ಹಾಗೂ ಎಸ್‌ ಪಿಪಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಮಧ್ಯಂತರ ಜಾಮೀನಿನಲ್ಲಿರುವ ದರ್ಶನ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ವಾರ ಕಳೆದರೂ ಅವರಿಗೆ ಸರ್ಜರಿ ಆಗಿಲ್ಲದ ಕಾರಣದಿಂದ ಪೊಲೀಸರು ದರ್ಶನ್‌ ಅವರ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!