- Advertisement -
![]()
- Advertisement -
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಕರಣದ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 3,991 ಪುಟಗಳಷ್ಟು ಚಾರ್ಜ್‌ಶೀಟ್ 24 ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಅದರ ಮೊದಲು ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕಾಗುತ್ತೆ. ಹಾಗಾಗಿ ಇಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ಗಳಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಚಾರ್ಜ್ ಶೀಟ್ ನಲ್ಲಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಈಗಾಗಲೇ ಕಾನೂನು ತಜ್ಞರಿಂದ ಪೊಲೀಸ್ ಇಲಾಖೆ ಸಲಹೆಯನ್ನೂ ಪಡೆದಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ಮಾಡಲಾಗಿದೆ ಎನ್ನಲಾಗಿದೆ.
- Advertisement -


