Friday, July 3, 2026
Homeಅಪರಾಧರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

- Advertisement -
- Advertisement -

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 49ನೇ ಪ್ರಮುಖ ಸಾಕ್ಷಿಯಾದ ‘ದುರ್ಗಾ ಬಾರ್ ಆ್ಯಂಡ್ ರೆಸ್ಟೋರೆಂಟ್’ ಕ್ಯಾಷಿಯರ್ ಸಂದೀಪ್‌ಗೆ ಬೆದರಿಕೆ ಹಾಕಿದ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ನಟ ದರ್ಶನ್ ಅಭಿಮಾನಿ ಸಂಘದ ಸದಸ್ಯರಾದ ಸುಹಾಸ್, ವೇಣು ಮತ್ತು ಪುನೀತ್ ಎಂಬ ಮೂವರು ಆರೋಪಿಗಳನ್ನು ಬುಧವಾರ ಬಂಧಿಸಲಾಗಿದ್ದು, ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ.

ಈ ಆರೋಪಿಗಳು ಆಕರ್ಷ್ ಎಂಬ ವ್ಯಕ್ತಿಯ ಮೂಲಕ ಸಾಕ್ಷಿ ಸಂದೀಪ್‌ಗೆ ಕರೆ ಮಾಡಿಸಿ, ತಾವು ಹೇಳಿದಂತೆಯೇ ಸಾಕ್ಷ್ಯ ನುಡಿಯಬೇಕು ಎಂದು ಬೆದರಿಕೆ ಹಾಕಿದ್ದರು. ಈ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!