Wednesday, June 3, 2026
Homeತಾಜಾ ಸುದ್ದಿಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

- Advertisement -
- Advertisement -

ಬೆಂಗಳೂರು : ಡಿ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಅವರ ಪತ್ನಿ ಸಹನಾ ಗಂಡುಮಗುವಿಗೆ ಜನ್ಮ ನೀಡಿದ್ದಾರೆ.

ಚಿತ್ರದುರ್ಗ ನಗರದ ಕೀರ್ತಿ ಆಸ್ಪತ್ರೆಯಲ್ಲಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ.

ಇಂದು ಬೆಳಗಿನ ಜಾವ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ತಾಯಿ -ಮಗು ಆರೋಗ್ಯವಾಗಿದ್ದಾರೆ ಅಲ್ಲದೆ ಕೀರ್ತಿ ಆಸ್ಪತ್ರೆಯಿಂದ ಡಾ.ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ನೀಡಿದ್ದಾರೆ. ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗು ಜನಿಸಿದ ಹಿನ್ನೆಲೆ , ವೈದ್ಯಾಧಿಕಾರಿಗಳು ಮಗುವನ್ನು ವಿಶೇಷ ನಿಗಾದಲ್ಲಿ ಇರಿಸಿದ್ದಾರೆ.

ಮೊಮ್ಮಗನ ಆಗಮನದಿಂದ ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ  ಖುಷಿಯಾಗಿದ್ದು, ನಮ್ಮ ಮಗನೇ ಹುಟ್ಟಿ ಬಂದಷ್ಟು ಸಂತೋಷವಾಗಿದೆ ಎಂದಿದ್ದಾರೆ. ಅಲ್ಲದೇ  ಮಗನನ್ನು ನೆನೆದು ಕಾಶೀನಾಥ ಶಿವನಗೌಡ್ರ ಕಣ್ಣೀರು ಹಾಕಿದ್ದಾರೆ.

- Advertisement -

Latest News

error: Content is protected !!