Thursday, May 2, 2024
Homeಕರಾವಳಿಉಡುಪಿಹಿರಿಯಡ್ಕ: ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ, ಇಬ್ಬರು ಆರೋಪಿಗಳ ಬಂಧನ !

ಹಿರಿಯಡ್ಕ: ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ, ಇಬ್ಬರು ಆರೋಪಿಗಳ ಬಂಧನ !

spot_img
- Advertisement -
- Advertisement -

ಹಿರಿಯಡ್ಕ: ವರದಿಯ ಪ್ರಕಾರ, ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಯುವಕರು ಎರಡು ತಿಂಗಳ ಅವಧಿಯಲ್ಲಿ ವಿವಿಧ ಸಂದರ್ಭಗಳಲ್ಲಿ ಅತ್ಯಾಚಾರವೆಸಗಿದ್ದಾರೆ.

ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಈ ಇಬ್ಬರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ಸಂದೀಪ್ ನಾಯ್ಕ್ ಮತ್ತು ವಿಘ್ನೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.

ಕೆಲಸದ ನಿಮಿತ್ತ ಬಾಲಕಿಯ ಪೋಷಕರು ಬೆಳ್ಳಂಬೆಳಗ್ಗೆ ಮನೆಯಿಂದ ದೂರ ಹೋಗಿದ್ದರು. ಈ ವೇಳೆ ಬಾಲಕಿ ತನ್ನ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯ ತಂದೆಯ ಸಂಬಂಧಿಕರಾಗಿರುವ ಈ ಇಬ್ಬರು ವ್ಯಕ್ತಿಗಳು ತನ್ನ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುವ ಮೂಲಕ ಪದೇ ಪದೇ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!