Thursday, June 4, 2026
Homeಕರಾವಳಿಬೆಂಗಳೂರಿನಲ್ಲಿ ತುಳು ಭವನಕ್ಕೆ ಜಾಗ ನೀಡುವಂತೆ ಸಚಿವರಿಗೆ ಮನವಿ

ಬೆಂಗಳೂರಿನಲ್ಲಿ ತುಳು ಭವನಕ್ಕೆ ಜಾಗ ನೀಡುವಂತೆ ಸಚಿವರಿಗೆ ಮನವಿ

- Advertisement -
- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ತುಳು ಭವನ ನಿರ್ಮಾಣಕ್ಕೆ ಜಾಗ ಒದಗಿಸುವಂತೆ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರಿಗೆ ಮನವಿ ಸಲ್ಲಿಸಲಾಗಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ಸಚಿವ ಅಂಗಾರ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಪತ್ರ ನೀಡಲಾಗಿದೆ.

ಬೆಂಗಳೂರು ಮಹಾನಗರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ತುಳು ಭಾಷಿಕರು ವಾಸ್ತವ್ಯ ಇದ್ದು, ತುಳು ಭವನ ನಿರ್ಮಾಣಕ್ಕೆ ಎರಡು ಎಕರೆ ಜಮೀನು ಒದಗಿಸಿಕೊಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.

ಮನವಿಗೆ ಸ್ಪಂದಿಸಿರುವ ಸಚಿವ ಅಂಗಾರ ಈ ನಿಟ್ಟಿನಲ್ಲಿ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ

ಸಚಿವರ ಭೇಟಿ ವೇಳೆ ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ಶ್ರೀಮತಿ ಕಾಂತಿ ಶೆಟ್ಟಿ, ಉದ್ಯಮಿ ರಾಮಕೃಷ್ಣ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!