Thursday, June 27, 2024
Homeಕರಾವಳಿಮಂಗಳೂರುಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಪಪ್ರಚಾರಕ್ಕೆ ಅವಕಾಶ ಮಾಡಿಕೊಡದಂತೆ ಮನವಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಪಪ್ರಚಾರಕ್ಕೆ ಅವಕಾಶ ಮಾಡಿಕೊಡದಂತೆ ಮನವಿ

spot_img
- Advertisement -
- Advertisement -

ಉಡುಪಿ; ಕೆಲವು ತಿಂಗಳುಗಳಿಂದ ‘ಗ್ರಾಮಾಭಿವೃದ್ಧಿ ಯೋಜನೆಯ ಸಾಲವನ್ನು ಯಾರೂ ಕಟ್ಟಬೇಡಿ’, ‘ಲೈಸೆನ್ಸ್ ಇಲ್ಲದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ’ ಇತ್ಯಾದಿ ಸುಳ್ಳು ಸುದ್ದಿಗಳನ್ನು ಕೆಲವರು ಹರಡುತ್ತಿದ್ದಾರೆ.ಹಾಗಾಗಿ ಬಡವರ ಅಭಿವೃದ್ಧಿಗಾಗಿ ರೂಪಿಸಿದ ‘ಗ್ರಾಮಾಭಿವೃದ್ಧಿ ಯೋಜನೆ’ ಎಂಬ ವ್ಯವಸ್ಥೆಯನ್ನು ಹಾಳು ಮಾಡುವ ಯಾವುದೇ ಹುನ್ನಾರ, ಪ್ರಯತ್ನಗಳಿಗೆ ಅವಕಾಶ ಮಾಡಿಕೊಡಬಾರದು.

ಈ ಕುರಿತು ಸೂಕ್ತ ಕ್ರಮಕೈಗೊಳ್ಳಬೇಕೆಂದು ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸಜ್ಜನ ನಾಗರೀಕರು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು, ಎಸ್.ಬಿ.ಐ. ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರು, ಬ್ಯಾಂಕ್ ಆಫ್ ಬರೋಡಾದ ಮುಖ್ಯ ವ್ಯವಸ್ಥಾಪಕರು, ಜಿಲ್ಲಾಧಿಕಾರಿಯವರ ಕಚೇರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.

- Advertisement -
spot_img

Latest News

error: Content is protected !!