Friday, June 5, 2026
Homeಕರಾವಳಿಉಡುಪಿಉಡುಪಿ ನಗರದ ರಸ್ತೆಗಳ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳಿಗಾಗಿ ಅನುದಾನ ನೀಡಲು ಸಿಎಂಗೆ ಮನವಿ !

ಉಡುಪಿ ನಗರದ ರಸ್ತೆಗಳ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳಿಗಾಗಿ ಅನುದಾನ ನೀಡಲು ಸಿಎಂಗೆ ಮನವಿ !

- Advertisement -
- Advertisement -

ಉಡುಪಿ: ಈ ಬಾರಿಯ ಉಡುಪಿಯ ಪ್ರಸಿದ್ಧ ಪರ್ಯಾಯ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಈಗಾಗಲೇ ತಯಾರಿ ಶುರುವಾಗಿದೆ. ಪರ್ಯಾಯ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ.

ಹಾಗಾಗಿ ಉಡುಪಿ ನಗರದ ರಸ್ತೆಗಳ ಅಭಿವೃದ್ಧಿ ಮಾಡಲು ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳಿಗಾಗಿ ಉಡುಪಿ ನಗರಸಭೆಗೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಕೆ. ರಘುಪತಿ ಭಟ್ ಅವರು ಉಡುಪಿ ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರುಗಳ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿದ್ದಾರೆ.

ಮನವಿಯನ್ನು ಸ್ವೀಕರಿಸಿ ಮಾತನಾಡಿದ ಅವರು ಚುನಾವಣಾ ನೀತಿ ಸಂಹಿತೆ ಮುಗಿದ ತಕ್ಷಣ ಉಡುಪಿ ನಗರದ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದರು. ಜೊತೆಗೆ ಪರ್ಯಾಯ ಉತ್ಸವಕ್ಕೆ ಸರ್ಕಾರದಿಂದ ಪೂರ್ತಿ ಸಹಕಾರ ನೀಡುವುದಾಗಿ ತಿಳಿಸಿದರು.

ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮಿ ಮಂಜುನಾಥ್, ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!