Monday, June 8, 2026
Homeಕರಾವಳಿಉಡುಪಿಮಲ್ಪೆ ಬಂದರಿನಲ್ಲಿ ಮೀನು ಆಯುತ್ತಿದ್ದ 16 ಮಕ್ಕಳ ರಕ್ಷಣೆ

ಮಲ್ಪೆ ಬಂದರಿನಲ್ಲಿ ಮೀನು ಆಯುತ್ತಿದ್ದ 16 ಮಕ್ಕಳ ರಕ್ಷಣೆ

- Advertisement -
- Advertisement -

ಮಲ್ಪೆ: ಇಂದು ಬೆಳಗ್ಗಿನ ಜಾವ 4.30ಕ್ಕೆ ಮಲ್ಪೆ ಬಂದರಿನಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 16 ಅಪ್ರಾಪ್ತ ಮೀನು ಆಯುವ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್,ಉಡುಪಿ ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ಉಡುಪಿ ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್, ಹೊಸಬೆಳಕು ಸಂಸ್ಥೆ ಜಂಟಿ ಕಾರ್ಯಾಚರಣೆ ನಡೆಸಿ 11 ಬಾಲಕಿಯರು, 5 ಬಾಲಕರು ಸೇರಿದಂತೆ 16 ಮೀನು ಆಯುವ ಮಕ್ಕಳನ್ನು ರಕ್ಷಿಸಲಾಗಿದೆ. ಇವರನ್ನು ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಇವರ ವಶಕ್ಕೆ ನೀಡಲಾಯಿತು.

- Advertisement -

Latest News

error: Content is protected !!